ಬಿಜೆಪಿ ತೆಕ್ಕೆಗೆ ಬಿಬಿಎಂಪಿ! ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆ…

ಇಂದು ಬಿಜೆಪಿಗೆ ಮತ್ತೊಂದು ಸಂಭ್ರಮ! ಬಿಬಿಎಂಪಿಯೂ ಬಿಜೆಪಿ ತೆಕ್ಕೆಗೆ ಸೇರಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 53ನೇ ಮೇಯರ್ ಆಗಿ ಬಿಜೆಪಿಯ ಜೋಗುಪಾಳ್ಯ ವಾರ್ಡ್ ನ ಕಾಪೆರ್Çೀರೇಟರ್ ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಕೇಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದೆ. ಮೇಯರ್ ಹುದ್ದೆಗೆ ಬಿಜೆಪಿಯಿಂದ ಗೌತಮ್ ಕುಮಾರ್ ಮತ್ತು ಪದ್ಮನಾಭರೆಡ್ಡಿ ಇಬ್ಬರು ನಾಮಪತ್ರ ಸಲ್ಲಿಸಿದ್ದರು, ಅಂತಿಮವಾಗಿ ಪದ್ಮನಾಭ ರೆಡ್ಡಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳಿಂದ ಮೇಯರ್ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಸತ್ಯನಾರಾಯಣ ಹಾಗೂ ಉಪಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್ ನ ಗಂಗಮ್ಮ ಕಣದಲ್ಲಿದ್ದರು. ಇದೀಗ ಮೇಯರ್ ಹಾಗೂ ಉಪಮೇಯರ್ ಪಟ್ಟ ಬಿಜೆಪಿಗೆ ಒಲಿದಿದೆ.

ಬಿಬಿಎಂಪಿಯಲ್ಲಿ ಒಟ್ಟು 257 ಸ್ಥಾನಗಳಿದ್ದು ಬಿಜೆಪಿಗೆ 125, ಕಾಂಗ್ರೆಸ್ 104, ಜೆಡಿಎಸ್ 21 ಹಾಗೂ 7 ಪಕ್ಷೇತರ ಕಾಪೆರ್Çೀರೇಟರ್ ಗಳಿದ್ದಾರೆ. ಮೇಯರ್ ಪಟ್ಟಕ್ಕಾಗಿ ಮ್ಯಾಜಿಕ್ ನಂಬರ್ 129 ಆಗಿದೆ. ಬಿಜೆಪಿಯ 125 ಹಾಗೂ ಪಕ್ಷೇತರರು 5 ಮಂದಿ ಮತ ಚಲಾಯಿಸಿದ್ದಾರೆ. ಗೌತಮ್ ಅವರ ಪರವಾಗಿ 129 ಮತಗಳು ಚಲಾವಣೆಯಾಗಿದೆ.

ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ನೂತನ ಮೇಯರ್ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಬಿಬಿಎಂಪಿ ಪ್ರವೇಶಿಸುವ ಕನಸು ನನಗಿರಲಿಲ್ಲ. ಆದರೆ ಪಕ್ಷ ನನಗೆ ಅವಕಾಶ ನೀಡಿದ್ದು ಅದಕ್ಕೆ ಯಾವಾಗಲೂ ಚಿರರುಣಿ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒಳ್ಳೆಯ ಹೆಸರು ಬರುವಂತೆ ನಾನು ಕೆಲಸ ಮಾಡುತ್ತೇನೆ. ಇದು ನಮ್ಮ ಬೆಂಗಳೂರು ಒಳ್ಳೆಯ ಕೆಲಸ ಮಾಡುವ ಮೂಲಕ ಚೆನ್ನಾಗಿಯೇ ಕಟ್ಟುತ್ತೇನೆ ಎಂದು ಭರವಸೆ ನೀಡಿದ್ದಾರೆ.

Be the first to comment