87 ನೇ ವಾಯುಸೇನಾ ದಿನ! ವೀರ ಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…

ದೇಶದ ಹೆಮ್ಮೆಯ ಪ್ರತೀಕವಾಗಿರುವ ವಾಯುಪಡೆಯ ವೀರ ಯೋಧರಿಗೆ ಮೂರು ಸೇನೆಗಳ ಮುಖ್ಯಸ್ಥರು ಇಂದು ಗೌರವ ಸಲ್ಲಿಸಿದ್ದಾರೆ. 87 ನೇ ವಾಯುಸೇನಾ ದಿನವಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾಯು ವೀರರಿಗೆ ಮತ್ತು ಅವರ ಕುಟುಂಬಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಭಾರತೀಯ ವಾಯುಪಡೆಯ ವಿವಿಧ ಸಾಧನೆಗಳನ್ನು ಪ್ರದರ್ಶಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಅಲ್ಲದೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಕೂಡಾ ವಾಯುಸೇನಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ನೀಲಿ ಬಣ್ಣದಲ್ಲಿರುವ ನಮ್ಮ ಪುರುಷ ಮತ್ತು ಮಹಿಳೆಯರು ಶೌರ್ಯ ಮತ್ತು ವೈಭವದಿಂದ ಆಕಾಶವನ್ನು ಸ್ಪರ್ಶಿಸುವ ಸಾಮಥ್ರ್ಯವುಳ್ಳವರು ಎಂದಿದ್ದಾರೆ. ಈ ವೀರರ ಧೈರ್ಯ, ಸಾಹಸ, ಶೌರ್ಯ, ಬದ್ಧತೆ, ಸಮರ್ಪಣೆ ಎಲ್ಲರಿಗೂ ಸ್ಫೂರ್ತಿ ಎಂದು ಟ್ವೀಟ್ ಮಾಡಿದ್ದಾರೆ.

ಕರಂಬಬೀರ್ ಸಿಂಗ್ ರಾಷ್ಟ್ರೀಯ ಯುದ್ಧ ಸ್ಮಾರಕ್ಕೆ ಭಾರತೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್, ವಾಯುಸೇನೆ ಮುಖ್ಯಸ್ಥ ಆರ್.ಕೆಎಸ್ ಭದೌರಿಯಾ ಮತ್ತು ನೌಕಾಪಡೆ ಮುಖ್ಯಸ್ಥ ಕರಂಬೀರ್ ಸಿಂಗ್ ಅವರು, ಪುಷ್ಪಾರ್ಚನೆ ನಡೆಸುವ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಿದರು. ರಾಷ್ಟ್ರದ ವಾಯುಪಡೆ 1950ರಿಂದ ನೆರೆಯ ಪಾಕಿಸ್ತಾನ ಹಾಗೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದೊಂದಿಗೆ ನಾಲ್ಕು ಯುದ್ಧಗಳಲ್ಲಿ ಭಾಗಿಯಾಗಿದೆ. ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್ ಮತ್ತು ಆಪರೇಷನ್ ಪೂಮಲೈ ಐಎಎಫ್ ಕೈಗೊಂಡ ಪ್ರಮುಖ ಕಾರ್ಯಾಚರಣೆಗಳಾಗಿವೆ. ಅಲ್ಲದೆ, ವಾಯುಸೇನೆ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲೂ ಭಾಗವಹಿಸುತ್ತದೆ.

Be the first to comment