ಅನರ್ಹ ಶಾಸಕರಿಗೆ ಬಿಗ್ ರಿಲೀಫ್! ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಗ್ರೀನ್ ಸಿಗ್ನಲ್…

ಕರ್ನಾಟಕದ 17 ಮಂದಿ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್‍ನ ನಿರ್ಧಾರದಿಂದಾಗಿ ಬಿಗ್ ರಿಲೀಫ್ ಸಿಕ್ಕಿದೆ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದೆ. 17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ 2023ರವರೆಗೆ ಅಂದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ. ಒಟ್ಟಾರೆಯಾಗಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Be the first to comment