ಮಹಾರಾಷ್ಟ್ರ ಸಿಎಂ ಆಗಿ ಫಡ್ನವೀಸ್ ಎರಡನೇ ಬಾರಿಗೆ ಅಧಿಕಾರ ಸ್ವೀಕಾರ… ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ…

ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 288 ಸ್ಥಾನಗಳಲ್ಲಿ ಬಿಜೆಪಿಯು 105 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ 56 ಸ್ಥಾನಗಳನ್ನು ಮತ್ತು ಎನ್‍ಸಿಪಿ 54 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಳಿಕ ಶಿವ ಸೇನೆ ತನಗೇ ಸಿಎಂ ಪಟ್ಟ ದೊರಕಬೇಕೆಂದು ನಾನಾ ಕಸರತ್ತು ಮಾಡಿತ್ತು. ಆದರೆ ಯಾವ ಕಸರತ್ತೂ ಬಿಜೆಪಿಯ ಮುಂದೆ ಫಲಿಸಲಿಲ್ಲ… ಕೊನೆಗೂ ಮಹಾರಾಷ್ಟ್ರದ ಸಿಎಂ ಆಗಿ ಎರಡನೇ ಬಾರಿಗೂ ಫಡ್ನಾವೀಸ್‍ರವರು ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಂತಾಯಿತು. ಕಳೆದ ರಾತ್ರಿಯಿಂದೀಚೆಗೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಸಿಪಿಯ ಹಲವು ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಇಂದು ಬೆಳಗ್ಗೆ ಸಿಎಂ ಆಗಿ ಎರಡನೇ ಬಾರಿಗೆ ದೇವೇಂದ್ರ ಫಡ್ನವಿಸ್, ಡಿಸಿಎಂ ಆಗಿ ಅಜಿತ್ ಪವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ…

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ದೇವೆಂದ್ರ ಫಡ್ನವಿಸ್ ಮತ್ತು ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿಜೀಯವರು ಟ್ವೀಟ್ ಮಾಡುವ ಮೂಲಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಇನ್ನೊಂದೆಡೆ, ಇಂದು ಸರ್ಕಾರ ರಚನೆಯಾದ ಕೂಡಲೇ ರಾಷ್ಟ್ಟಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಂಡಿದ್ದಾರೆ. ಕಳೆದ ನವೆಂಬರ್ 12ರಂದು ಹೇರಿಕೆಯಾಗಿದ್ದ ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳುವುದಾಗಿ ರಾಮನಾಥ್ ಕೋವಿಂದ್ ಅಧಿಸೂಚನೆ ಹೊರಡಿಸಿದ್ದಾರೆ.

Be the first to comment