ಹರಿಯಾಣ ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಸಿಎಂ ಮನೋಹರ್ ಲಾಲ್ ಖಟ್ಟರ್ ನಿರ್ಧಾರ…

ಭಗವದ್ಗೀತೆ ನಮ್ಮ ಶಾಸ್ತ್ರ ಪರಂಪರೆ ಇತಿಹಾಸದಲ್ಲಿ ಬಹಳ ಮಹತ್ವದ ಶ್ರೇಷ್ಠ ಗ್ರಂಥ. ಇಂತಹ ಶ್ರೇಷ್ಠ ಗ್ರಂಥವನ್ನು ಇದೀಗ ಹರಿಯಾಣದ ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ಹೌದು… ಅತ್ಯಂತ ಪವಿತ್ರ ಗ್ರಂಥವಾದ ಭಗವದ್ಗೀತೆಯನ್ನು ಹರಿಯಾಣದ ಶಾಲಾ ಪಠ್ಯಪುಸ್ತಕಗಳಲ್ಲಿ ಅಳವಡಿಸುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಘೋಷಿಸಿದ್ದಾರೆ. ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸುವ ಉದ್ಧೇಶವನ್ನು ಇಟ್ಟುಕೊಂಡು ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿರುವುದಾಗಿ ಅವರು ಹೇಳಿದ್ದಾರೆ. ಭಗವದ್ಗೀತೆಯ ಶ್ಲೋಕಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕೆಂದು ಅಭಿಪ್ರಾಯವನ್ನು ನಾವು ಹೊಂದಿದ್ದೇವೆ.

ಈ ಹಿಂದೆಯೂ ನಾವಿದನ್ನು ಹೇಳಿದ್ದೆವು. ಮಕ್ಕಳು ಉತ್ತಮ ಮೌಲ್ಯಗಳನ್ನು ಕಲಿಯಬೇಕು ಎಂಬ ಉದ್ಧೇಶದಿಂದ ಗೀತೆಯ ಶ್ಲೋಕಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುತ್ತಿದ್ದೇವೆ ಎಂದಿದ್ದಾರೆ. ಭಗವದ್ಗೀತೆಯು ಜೀವನ ಪಾಠವನ್ನು ಒಳಗೊಂಡಿದೆ ಅದು ಯಾವುದೇ ಧರ್ಮಕ್ಕೆ ಸಂಬಂಧಪಟ್ಟ ಗ್ರಂಥವಲ್ಲ ಎಂದಿದ್ದಾರೆ. ಗೀತಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಶ್ರೀಕೃಷ್ಣನು ಮಹಾಭಾರತದಲ್ಲಿ ಅರ್ಜುನನಿಗೆ ಬೋಧಿಸಿದ ಭಗವದ್ಗೀತೆ ಸಾರಾಂಶವನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡಲ್ಲಿ ಸುಂದರ ಜೀವನ ಕಟ್ಟಿಕೊಳ್ಳಲು ಸಾಧ್ಯ. ಇನ್ನು ಮಹಾಭಾರತದ ಅನೇಕ ಪ್ರಸಂಗಗಳು ಇಂದಿನ ಯುವ ಜನಾಂಗಕ್ಕೆ ಮಾದರಿ ಮತ್ತು ಪ್ರೇರಕ ಶಕ್ತಿಯಾಗಿರುವ ಮಹಾಕಾವ್ಯಗಳಲ್ಲೊಂದು. ಇಂತಹ ಮಹತ್ವದ ಶ್ರೇಷ್ಠ ಗ್ರಂಥವನ್ನು ಮಕ್ಕಳಿಗೆ ಶಾಲೆಯಲ್ಲಿ ಬೋಧಿಸಲು ಹರಿಯಾಣ ಸರ್ಕಾರ ಮುಂದಾಗಿರುವುದು ನಿಜಕ್ಕೂ ಒಳ್ಳೆಯ ವಿಚಾರ…

Be the first to comment